
ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದ್ದಾರೆ.
ಶಮಾನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿರುವ ಮಹಾಸಭಾದ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿಸಿದರು.
ಈಶ್ವರ ಖಂಡ್ರೆ ಅವರು ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ ಖಂಡ್ರೆ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ಹಿಂದೆ ಈಶ್ವರ ಖಂಡ್ರೆ ಅವರ ತಂದೆ ದಿ.ಭೀಮಣ್ಣ ಖಂಡ್ರೆ ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು.



ನಿಮ್ಮ ಕಾಮೆಂಟ್ ಬರೆಯಿರಿ