ಶಿವಮೊಗ್ಗ: ತಡರಾತ್ರಿ ಹೊತ್ತಿ ಉರಿದ ಬಸ್ ; ಪ್ರಯಾಣಿಕರು ಪಾರು

ಶಿವಮೊಗ್ಗ: ಖಾಸಗಿ ಸ್ಲೀಪರ್​​ ಬಸ್ಸು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ಬಸ್‌ ತೆರಳುತಿತ್ತು ಎಂದು ಹೇಳಲಾಗಿದೆ. ಮಾರ್ಗ ಮಧ್ಯೆ ಸೂಡುರು ಬಳಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಾಹನವು ತೀವ್ರವಾಗಿ ಹಾನಿಗೊಳಗಾಗಿದ್ದರೂ, ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಏಳೆಂಟು ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಚಾಲಕನ ಅದ್ಭುತ ಸಮಯಪ್ರಜ್ಞೆಯಿಂದಾಗಿ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಾಗ ತಕ್ಷಣ ಎಚ್ಚೆತ್ತ ಚಾಲಕ, ಬಸ್ಸನ್ನು ನಿಯಂತ್ರಿಸಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಇದರಿಂದಾಗಿ ಪ್ರಯಾಣಿಕರಿಗೆ ಎಮರ್ಜೆನ್ಸಿ ಡೋರ್ ಮೂಲಕ ಹೊರಬರಲು ಸಾಧ್ಯವಾಯಿತು. ಬೆಂಕಿ ಇಡೀ ಬಸ್ಸಿಗೆ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದರಿಂದ, ಪ್ರಯಾಣಿಕರ ಬಟ್ಟೆ-ಬರೆ ಹಾಗೂ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಪ್ರಮುಖ ಸುದ್ದಿ :-   ಉದ್ಧವ್‌ಗೆ ಭಾರಿ ಹಿನ್ನಡೆ ; ಶಿಂಧೆ ಬಣದ ಜೊತೆ ಶಿವಸೇನೆ(ಯುಬಿಟಿ) 6 ಸಂಸದರ ವಿಲೀನಕ್ಕೆ ಲೋಕಸಭೆ ಸ್ಪೀಕರ್ ಅನುಮೋದನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement