ಬೆಂಗಳೂರು : ಕನ್ನಡದ ಖ್ಯಾತ ನಟನಿಂದ ಸರಣಿ ಅಪಘಾತ ; ದೂರು ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಕುಡಿದ ಅಮಲಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡೋ ಆಸ್ಪತ್ರೆ ಸಿಗ್ನಲ್ ಬಳಿ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ ಎನ್ನಲಾಗಿದೆ.
ಮಾಹಿತಿ ಪ್ರಕಾರ, ರೆಡ್‌ ಸಿಗ್ನಲ್ ಬಿದ್ದಿದ್ದರಿಂದ ವಾಹನಗಳು ಸಾಲಾಗಿ ನಿಂತಿದ್ದವು. ಈ ವೇಳೆ ಅತಿವೇಗವಾಗಿ ಬಂದ ಮಯೂರ್ ಪಟೇಲ್ ಅವರ ಫಾರ್ಚುನರ್ ಕಾರು, ನಿಂತಿದ್ದ ವಾಹನಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಎರಡು ಕಾರುಗಳು ಮತ್ತು ಒಂದು ಸರ್ಕಾರಿ ವಾಹನ ಸೇರಿದಂತೆ ಒಟ್ಟು ನಾಲ್ಕು ಕಾರುಗಳು ಜಖಂಗೊಂಡಿವೆಎನ್ನಲಾಗಿದೆ.

ಘಟನೆ ನಡೆದ ಕೂಡಲೇ ಹಲಸೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಯೂರ್ ಪಟೇಲ್ ಅವರನ್ನು ವಶಕ್ಕೆ ಪಡೆದರು. ನಟ ಮದ್ಯಪಾನ ಮಾಡಿರುವುದನ್ನು ಖಚಿತಪಡಿಸಿಕೊಳ್ಳಲು ಬ್ರೀತ್ ಅನಲೈಸರ್ ಪರೀಕ್ಷೆ (ಮದ್ಯಪಾನ ಪರೀಕ್ಷೆ) ನಡೆಸಲಾಯಿತು. “ಪರೀಕ್ಷಾ ವರದಿಯಲ್ಲಿ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ (Positive). ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ,” ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಾಧಿತ ಕಾರು ಚಾಲಕರೊಬ್ಬರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ನಟ ಮಯೂರ್ ಪಟೇಲ್ ಅವರ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement