ಕೇಂದ್ರ ಬಜೆಟ್ 2026: ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಘೋಷಣೆಗಳು

ನವದೆಹಲಿ: ಅನಿಮೇಷನ್ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ, ಮುಂಬೈನ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜೀಸ್’ ಸಹಯೋಗದೊಂದಿಗೆ 15,000 ಪ್ರೌಢಶಾಲೆಗಳು ಮತ್ತು 500 ಕಾಲೇಜುಗಳಲ್ಲಿ ಅನಿಮೇಷನ್, ವಿಶ್ಯುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (AVGC) ಕಂಟೆಂಟ್ ಕ್ರಿಯೇಟರ್ ಲ್ಯಾಬ್‌ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಬಜೆಟ್ 2026ರಲ್ಲಿ ಘೋಷಿಸಿದೆ.
ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 1,39,289.48 ಕೋಟಿ ರೂ ಗಳನ್ನು ಘೋಷಿಸಿದ್ದಾರೆ. ಇದು ಕಳೆದ ವರ್ಷಕ್ಕಿಂತ ಶೇ. 6.22 ರಷ್ಟು ಹೆಚ್ಚಾಗಿದೆ (ಕಳೆದ ವರ್ಷ 1,28,650 ಕೋಟಿ ರೂ. ನೀಡಲಾಗಿತ್ತು). ಉನ್ನತ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ 75,000 ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲು ಮತ್ತು ಮೂರು ಹೊಸ ಏಮ್ಸ್‌ (AIIMS) ಆಸ್ಪತ್ರೆಗಳನ್ನು ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ.
ಶಿಕ್ಷಣ ಕ್ಷೇತ್ರದ  ಪ್ರಮುಖ ಘೋಷಣೆಗಳು:
ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳ (AIIA) ಸ್ಥಾಪನೆ.
ಮೂರು ಹೊಸ ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ (NIPER) ಸ್ಥಾಪನೆ.
ಐದು ವಿಶ್ವವಿದ್ಯಾಲಯ ಟೌನ್‌ಶಿಪ್‌ಗಳ ನಿರ್ಮಾಣ.
ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್ ಸ್ಥಾಪನೆ.
ಒಂದು ಹೊಸ ರಾಷ್ಟ್ರೀಯ ವಿನ್ಯಾಸ ಸಂಸ್ಥೆ (NID) ಸ್ಥಾಪನೆ.
ವಿದೇಶಿ ಶಿಕ್ಷಣ ಮತ್ತು ವೈದ್ಯಕೀಯ ಉದ್ದೇಶಗಳಿಗಾಗಿ ‘ಲಿಬರಲೈಸ್ಡ್ ರೆಮಿಟೆನ್ಸ್ ಸ್ಕೀಮ್’ (LRS) ಅಡಿಯಲ್ಲಿ ಟಿಸಿಎಸ್‌ (TCS) ದರ ಶೇ. 5 ರಿಂದ ಶೇ. 2 ಕ್ಕೆ ಇಳಿಕೆ.
‘ಶಿಕ್ಷಣದಿಂದ ಉದ್ಯೋಗ ಮತ್ತು ಉದ್ಯಮಶೀಲತೆ’ ಕುರಿತು ಉನ್ನತ ಮಟ್ಟದ ಸಮಿತಿ ರಚನೆ.
ಮೂರು ಹೊಸ ಏಮ್ಸ್‌ ಸಂಸ್ಥೆಗಳ ಸ್ಥಾಪನೆ.
ಐದು ವರ್ಷಗಳಲ್ಲಿ 75,000 ಹೊಸ ವೈದ್ಯಕೀಯ ಸೀಟುಗಳ ಸೇರ್ಪಡೆ.
ವೃತ್ತಿಪರ ಸಂಸ್ಥೆಗಳಿಗೆ (ICAI, ICSI, ICMAI) ನೆರವಾಗಲು ತರಬೇತಿ ಪಡೆದ “ಕಾರ್ಪೊರೇಟ್ ಮಿತ್ರರ” ತಂಡದ ರಚನೆ.

ಪ್ರಮುಖ ಸುದ್ದಿ :-   8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement