ಮುಂಬೈ: ನಿರ್ದೇಶಕ ರೋಹಿತ್ ಶೆಟ್ಟಿ ನಿವಾಸದ ಹೊರಗೆ ಗುಂಡಿನ ದಾಳಿ

ಮುಂಬೈ : ಮುಂಬೈನ ಜುಹು ಪ್ರದೇಶದಲ್ಲಿರುವ ಖ್ಯಾತ ಚಲನಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆಯ ಹೊರಗೆ ಅಪರಿಚಿತ ದುಷ್ಕರ್ಮಿಗಳು ಐದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.  ಈ ಘಟನೆಯ ನಂತರ ಅವರ ನಿವಾಸದ ಸುತ್ತ ಭಾರಿ ಪೊಲೀಸ್ ಭದ್ರತೆ  ನಿಯೋಜಿಸಲಾಗಿದೆ.
ಮುಂಬೈ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಎಲ್ಲ ಆಯಾಮಗಳಿಂದಲೂ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದ ಸಮಯದಲ್ಲಿ ರೋಹಿತ್ ಶೆಟ್ಟಿ ಅವರು ಮನೆಯಲ್ಲಿದ್ದರೇ ಎಂಬ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.
ರೋಹಿತ್ ಶೆಟ್ಟಿ ಅವರು ಹಿಂದಿ ಚಿತ್ರರಂಗದ ಅತ್ಯಂತ ಯಶಸ್ವಿ ನಿರ್ದೇಶಕ ಮತ್ತು ನಿರ್ಮಾಪಕರಲ್ಲಿ ಒಬ್ಬರು. ಅವರು ವಿಶೇಷವಾಗಿ ಆಕ್ಷನ್ ಮತ್ತು ಕಾಮಿಡಿ ಚಿತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಗೋಲ್‌ಮಾಲ್ ಸರಣಿ, ಸಿಂಗಂ, ಸಿಂಬಾ, ಸೂರ್ಯವಂಶಿ ಮತ್ತು ಚೆನ್ನೈ ಎಕ್ಸ್‌ಪ್ರೆಸ್ ಮೊದಲಾದವುಗಳು ಅವರ ಜನಪ್ರಿಯ ಚಲನಚಿತ್ರಗಳಾಗಿವೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement