ಶಿವಮೊಗ್ಗ : ಜಿಲ್ಲೆಯ ಸಾಗರ ಮಾರಿಕಾಂಬ ದೇವಿ ಜಾತ್ರೆ ಮಂಗಳವಾರದಿಂದ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ಅಸ್ವಸ್ಥತೆಯಿಂದಾಗಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವರದಿಗಳು ತಿಳಿಸಿವೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿರಬಹುದು ಎನ್ನಲಾಗಿದೆ.
.


ನಿಮ್ಮ ಕಾಮೆಂಟ್ ಬರೆಯಿರಿ