ಟಿ20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಬೇಡಿ : ಪಾಕಿಸ್ತಾನಕ್ಕೆ ‘2009ರ ಲಾಹೋರ್ ದಾಳಿ’ ನೆನಪಿಸಿದ ಶ್ರೀಲಂಕಾ

ಕೊಲಂಬೊ: 2026ರ ಟಿ20 ವಿಶ್ವಕಪ್‌ನ ಸಹ-ಆತಿಥೇಯ ರಾಷ್ಟ್ರವಾಗಿರುವ ಶ್ರೀಲಂಕಾ, ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಲೀಗ್ ಹಂತದ ಪಂದ್ಯವನ್ನು ಬಹಿಷ್ಕರಿಸುವ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಕ್ಕೆ ಅಧಿಕೃತವಾಗಿ ವಿನಂತಿಸಿದೆ.
ಪಾಕಿಸ್ತಾನ ಸರ್ಕಾರವು ತನ್ನ ರಾಷ್ಟ್ರೀಯ ತಂಡವು ಟೂರ್ನಿಯಲ್ಲಿ ಭಾಗವಹಿಸಲಿದೆ, ಆದರೆ ಭಾರತದ ವಿರುದ್ಧದ ಪಂದ್ಯವನ್ನು ಮಾತ್ರ ಆಡುವುದಿಲ್ಲ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ನಡುವೆ ಬಿಕ್ಕಟ್ಟು ಏರ್ಪಟ್ಟಿದ್ದು, ಪಂದ್ಯ ರದ್ದಾದರೆ ಟಿಕೆಟ್ ಮಾರಾಟದಿಂದ ಬರಬೇಕಿದ್ದ ಭಾರಿ ಆದಾಯವನ್ನು ಕಳೆದುಕೊಳ್ಳುವ ಭೀತಿಯಲ್ಲಿ ಶ್ರೀಲಂಕಾ ಕ್ರಿಕೆಟ್ (SLC) ಮಂಡಳಿ ಇದೆ.

ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಪತ್ರದ ಸಾರಾಂಶ:
ಪಿಸಿಬಿಗೆ ಬರೆದ ಔಪಚಾರಿಕ ಪತ್ರದಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯುಪಿಸಿಬಿಗೆ ಬರೆದ ಔಪಚಾರಿಕ ಪತ್ರದಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯು “2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ನಿಲುವನ್ನು ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಮಂಡಳಿಗೆ ತಿಳಿಸಿರುವ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ನಾವು ನಿಮಗೆ ಬರೆಯುತ್ತಿದ್ದೇವೆ. ಈ ವರದಿಗಳಿಂದ, ಪಿಸಿಬಿ ತನ್ನ ರಾಷ್ಟ್ರೀಯ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆ ಎಂದು ದೃಢಪಡಿಸಿದೆ, ಪಾಕಿಸ್ತಾನ ಒಳಗೊಂಡ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಅದೇ ಸಮಯದಲ್ಲಿ, ಫೆಬ್ರವರಿ 15, 2026 ರಂದು ಕೊಲಂಬೊದ ಆರ್. ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾಗವಹಿಸದಿರಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ,” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಶ್ರೀಲಂಕಾವು ಈ ಮಹತ್ವದ ಪಂದ್ಯಕ್ಕಾಗಿ ಈಗಾಗಲೇ ಎಲ್ಲಾ ವಾಣಿಜ್ಯ, ಕಾರ್ಯಾಚರಣೆ, ಲಾಜಿಸ್ಟಿಕ್ಸ್ ಮತ್ತು ಭದ್ರತಾ ವ್ಯವಸ್ಥೆಗಳನ್ನು ಪೂರ್ಣಗೊಳಿಸಿದೆ. ಪಂದ್ಯದ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

ಪಾಕಿಸ್ತಾನಕ್ಕೆ ಜವಾಬ್ದಾರಿ ನೆನಪಿಸಿದ ಶ್ರೀಲಂಕಾ
ಪಾಕಿಸ್ತಾನಕ್ಕೆ ತನ್ನ ಜವಾಬ್ದಾರಿಯನ್ನು ನೆನಪಿಸಿದ ಶ್ರೀಲಂಕಾ, 2009ರಲ್ಲಿ ಲಾಹೋರ್‌ನಲ್ಲಿ ಶ್ರೀಲಂಕಾ ತಂಡದ ಬಸ್ ಮೇಲೆ ಭಯೋತ್ಪಾದಕ ದಾಳಿ ನಡೆದ ನಂತರವೂ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಮೊದಲ ಪ್ರಮುಖ ತಂಡ ಶ್ರೀಲಂಕಾ ಎಂದು ಅದು ನೆನಪಿಸಿದೆ. ಆ ದಾಳಿಯ ನಂತರ ಸುದೀರ್ಘ ಕಾಲ ಪಾಕಿಸ್ತಾನದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿರಲಿಲ್ಲ.
“ಶ್ರೀಲಂಕಾ ತಂಡವು ಅತ್ಯಂತ ಸವಾಲಿನ ಮತ್ತು ಸೂಕ್ಷ್ಮ ಸಂದರ್ಭಗಳಲ್ಲಿಯೂ ಹಲವು ಬಾರಿ ಪಾಕಿಸ್ತಾನ ಪ್ರವಾಸ ಮಾಡಿದೆ. 2009ರ ದಾಳಿಯಲ್ಲಿ ನಮ್ಮ ಆಟಗಾರರು ಮತ್ತು ಅಧಿಕಾರಿಗಳು ದೈಹಿಕವಾಗಿ ಗಾಯಗೊಂಡಿದ್ದಲ್ಲದೆ, ಮಾನಸಿಕವಾಗಿಯೂ ಕುಗ್ಗಿದ್ದರು. ಇಷ್ಟಾದರೂ ನಾವು ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಬಾಂಧವ್ಯವನ್ನು ಗೌರವಿಸಿ ಅಲ್ಲಿಗೆ ತಂಡವನ್ನು ಕಳುಹಿಸಿದ್ದೆವು,” ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ತಿಳಿಸಿದೆ.
ಅಲ್ಲದೆ, 2025ರಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ನಂತರವೂ ತಂಡದ ಕೆಲವು ಆಟಗಾರರು ಹಿಂದಿರುಗಲು ಬಯಸಿದ್ದರೂ, ಶ್ರೀಲಂಕಾ ತನ್ನ ಬದ್ಧತೆಯನ್ನು ಉಳಿಸಿಕೊಂಡು ಪ್ರವಾಸವನ್ನು ಪೂರ್ಣಗೊಳಿಸಿದ್ದನ್ನು ಉಲ್ಲೇಖಿಸಲಾಗಿದೆ.
ಇತರ ರಾಷ್ಟ್ರಗಳು ಪಾಕಿಸ್ತಾನಕ್ಕೆ ಹೋಗಲು ಹಿಂಜರಿಯುತ್ತಿದ್ದಾಗ ಶ್ರೀಲಂಕಾ ಬೆಂಬಲವಾಗಿ ನಿಂತಿತ್ತು. ಅದೇ ರೀತಿ ಈಗ ಶ್ರೀಲಂಕಾದ ಆರ್ಥಿಕ ಹಿತದೃಷ್ಟಿಯಿಂದ ಮತ್ತು ಕ್ರಿಕೆಟ್‌ನ ಒಳಿತಿಗಾಗಿ ಪಾಕಿಸ್ತಾನವು ಭಾರತದ ವಿರುದ್ಧದ ಪಂದ್ಯವನ್ನು ಆಡಬೇಕು ಎಂಬುದು ಶ್ರೀಲಂಕಾದ ಆಶಯವಾಗಿದೆ.

ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement