ಬೆಂಗಳೂರು | ನೆಲಮಂಗಲದ ಬಳಿ ಹೊತ್ತಿ ಉರಿದ ಖಾಸಗಿ ಬಸ್‌

ಬೆಂಗಳೂರು: ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ಬೆಳಗಿನ ಜಾವ ನೆಲಮಂಗಲದ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್, ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ತಕ್ಷಣವೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಸಂಪೂರ್ಣ ಬಸ್ ಅಗ್ನಿಗೆ ಆಹುತಿಯಾಗಿದೆ. ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಚಾಲಕ ಹಾಗೂ ಪ್ರಯಾಣಿಕರು ತಕ್ಷಣ ಬಸ್‌ನಿಂದ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಹೆದ್ದಾರಿಯಲ್ಲಿ ನಡೆಯುತ್ತಿದ್ದ ಕಾಮಗಾರಿ ಹಿನ್ನೆಲೆಯಲ್ಲಿ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ಪಡೆದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement