ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ ಮೌಲ್ಯದ ಗಾಂಜಾ ಪತ್ತೆ ; ಮೂವರ ಬಂಧನ

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಥಾಯ್ಲೆಂಡ್‌ ಹಾಗೂ ಮಲೇಶಿಯಾದಿಂದ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ವಲಸೆ ವಿಭಾಗದಲ್ಲಿ ಪರಿಶೀಲಿಸಿದ ವೇಳೆ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಗಾಂಜಾ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement