ಪುಣೆ: ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನ ಅವರನ್ನು ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ಪತ್ನಿ ಪ್ರತಿಭಾ ಪವಾರ್ ಜೊತೆಗಿದ್ದರು.
85 ವರ್ಷದ ಹಿರಿಯ ರಾಜಕೀಯ ನಾಯಕ ಶರದ್ ಪವಾರ್ ಅವರು ಕೆಮ್ಮು, ಶೀತ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪುಣೆಯ ರೂಬಿ ಹಾಲ್ ಕ್ಲಿನಿಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದೆ. ಹೆಚ್ಚಿನ ಪರೀಕ್ಷೆಗಳ ನಂತರ ಅವರು ಆಸ್ಪತ್ರೆಯಲ್ಲಿಯೇ ಇರಬೇಕೇ ಅಥವಾ ಪ್ರಾಥಮಿಕ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಬೇಕೇ ಎಂದು ನಿರ್ಧರಿಸಲಾಗುತ್ತದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ