ವಿಧಾನಸೌಧದ ಸಚಿವರ ಕಚೇರಿಯಲ್ಲಿ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳ್ಳತನ

ಬೆಂಗಳೂರು : ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರ ವಿಧಾನಸೌಧದಲ್ಲಿ ಕಚೇರಿಯಲ್ಲಿ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ. ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನವೀನ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೋಗಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿತ್ತು.
ತಕ್ಷಣ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಕಂಡುಬಂದಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದ. ವಿಚಾರಣೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement