₹1,000 ಹಣ ಪಡೆದು ಪತ್ನಿಯನ್ನೇ ಸ್ನೇಹಿತರಿಗೆ ಒಪ್ಪಿಸಿದ ಪತಿ ; ಅವರಿಂದ ಸಾಮೂಹಿಕ ಅತ್ಯಾಚಾರ

ಬದೌನ್ (ಉತ್ತರ ಪ್ರದೇಶ): ಕೇವಲ ಒಂದು ಸಾವಿರ ರೂಪಾಯಿ ಹಣಕ್ಕಾಗಿ ಪತಿಯೇ ತನ್ನ ಪತ್ನಿಯನ್ನು ಸ್ನೇಹಿತರಿಗೆ ಒಪ್ಪಿಸಿದ ನಂತರ ಅವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬದೌನ್‌ನಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಫೈಜ್‌ಗಂಜ್ ಬೆಹ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ 30 ವರ್ಷದ ಮಹಿಳೆಯೊಬ್ಬರು ಭಾನುವಾರ ಸಂಜೆ ದೂರು ದಾಖಲಿಸಿದ್ದಾರೆ. ತನ್ನ ಪತಿಯು ₹1,000 ಹಣವನ್ನು ಪಡೆದುಕೊಂಡು, ತನ್ನನ್ನು ಆತನ ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬಳಿಕ ಆರೋಪಿಗಳಾದ ಬಾಲಕಿಶನ್ ಮತ್ತು ಪಪ್ಪು ಎಂಬುವವರು ಮಹಿಳೆಯನ್ನು ನೀಲಗಿರಿ ತೋಪಿಗೆ ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಹಿಯ ದೂರಿನ ಆಧಾರದ ಮೇಲೆ, ಪೊಲೀಸರು ಪತಿ ಮತ್ತು ಆತನ ಇಬ್ಬರು ಸ್ನೇಹಿತರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಸೋಮವಾರ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯ ನಂತರ ತಲೆಮರೆಸಿಕೊಂಡಿರುವ ಮಹಿಳೆಯ ಪತಿ ಚುಟ್ಟನ್ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಚುರುಕುಗೊಳಿಸಲಾಗಿದೆ.

ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement