ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ ಜಾಮೀನು‌ ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು : ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿಯ ಕೆ ಆರ್‌ ಪುರ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಇದರಿಂದ ಬಸವರಾಜ ಅವರಿಗೆ ಬಂಧನದ ಭೀತಿ ಎದುರಾಗಿದೆ.
2026ರ ಜನವರಿ 29ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಸುನೀಲದತ್ತ ಯಾದವ್‌ ಅವರ ಏಕಸದಸ್ಯ ಪೀಠವು ಮಂಗಳವಾರ ಪ್ರಕಟಿಸಿದ್ದು, ಅರ್ಜಿ ವಜಾಗೊಳಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್​​ ವಜಾ‌ಗೊಳಿಸಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕನಿಗೆ ಬಂಧನ ಭೀತಿ ಎದುರಾಗಿದೆ.
ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈ 15ರಂದು ರೌಡಿಶೀಟರ್‌ ಬಿಕ್ಲು ಶಿವ ಕೊಲೆ ನಡೆದಿತ್ತು. ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಬೈರತಿ ಬಸವರಾಜ ಅವರು ಐದನೇ ಆರೋಪಿಯಾಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement