ಟಿ20 ವಿಶ್ವಕಪ್ | ಟೀಮ್ ಇಂಡಿಯಾಕ್ಕೆ ಆಘಾತ: ಸ್ಟಾರ್ ಬ್ಯಾಟರ್ ಅಭಿಷೇಕ ಶರ್ಮಾ ಆಸ್ಪತ್ರೆಗೆ ದಾಖಲು

ನವದೆಹಲಿ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಅಭಿಷೇಕ ಶರ್ಮಾ ಅವರು ತೀವ್ರವಾದ ಹೊಟ್ಟೆ ನೋವಿನ ಸೋಂಕಿನಿಂದಾಗಿ (Stomach Infection) ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಗುರುವಾರ ನಡೆಯಲಿರುವ ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯಕ್ಕೆ ಅವರು ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಅಮೆರಿಕ ವಿರುದ್ಧದ ಪಂದ್ಯಕ್ಕೂ ಮುನ್ನವೇ ಅಭಿಷೇಕ ಅವರು ಅಸ್ವಸ್ಥರಾಗಿದ್ದರು. ಪಂದ್ಯದ ನಂತರ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ತೀವ್ರ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್ಸ್ ನೀಡಲಾಗುತ್ತಿದೆ.

ದೆಹಲಿಯ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ತಂಡದ ಅಭ್ಯಾಸ ಅವಧಿಯಲ್ಲಿ ಅಭಿಷೇಕ್ ಪಾಲ್ಗೊಂಡಿರಲಿಲ್ಲ. “ಅಭಿಷೇಕ ಇನ್ನು ಕೂಡ ಹೊಟ್ಟೆಯ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಗುಣಮುಖರಾಗುತ್ತಾರೆ ಎಂಬ ಭರವಸೆ ಇದೆ,” ಎಂದು ಸಹಾಯಕ ಕೋಚ್ ರಿಯಾನ್ ಟೆನ್ ಡೋಶೇಟ್ ತಿಳಿಸಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ, ಅಭಿಷೇಕ್ ಶರ್ಮಾ ಅವರ ಆರೋಗ್ಯದ ಮೇಲೆ ಬಿಸಿಸಿಐ (BCCI) ವೈದ್ಯಕೀಯ ತಂಡ ನಿಗಾ ವಹಿಸಿದೆ.

ವಾಷಿಂಗ್ಟನ್ ಸುಂದರ ಸೇರ್ಪಡೆ:
ಅಭಿಷೇಕ್ ಶರ್ಮಾ ಅವರ ಅನಿಶ್ಚಿತತೆಯ ನಡುವೆಯೇ, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ ಅವರು ಭಾರತೀಯ ತಂಡವನ್ನು ಸೇರಿಕೊಂಡಿದ್ದಾರೆ. ಬುಧವಾರ (ಫೆಬ್ರವರಿ 12)ನಡೆಯಲಿರುವ ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಿರಲಿದ್ದಾರೆ.
ವೇಗಿ ಜಸ್ಪ್ರೀತ್ ಬುಮ್ರಾ ಬಗ್ಗೆ ಮಾಹಿತಿ ನೀಡಿದ ಡೋಶೇಟ್, “ಬುಮ್ರಾ ಈಗ ಸಾಕಷ್ಟು ಚೇತರಿಸಿಕೊಂಡಿದ್ದಾರೆ. 10 ದಿನಗಳ ವಿರಾಮದ ನಂತರ ಅವರು ಬೌಲಿಂಗ್ ಆರಂಭಿಸಿದ್ದು, ನೆಟ್ಸ್‌ನಲ್ಲಿ ಅಭ್ಯಾಸ ನಡೆಸಲಿದ್ದಾರೆ,” ಎಂದು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement