ಬೆಂಗಳೂರು : ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ಬೆಂಗಳೂರಿನ ಥಣಿಸಂದ್ರ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ.
ಮೃತ ಮಕ್ಕಳನ್ನು ವರ್ಷಾ (2 ವರ್ಷ) ಹಾಗೂ ಬಾನು (4 ವರ್ಷ) ಬುಧವಾರ ಬೆಳಿಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ ಎಂಬವರು ಮ್ಮ ಸ್ಕೂಟರ್‌ನಲ್ಲಿ ತನ್ನ ಮಗಳಾದ ವರ್ಷಾ ಮತ್ತು ಅಣ್ಣನ ಮಗಳಾದ ಬಾನು ಅವರನ್ನು ಕೂಡ್ರಿಸಿಕೊಂಡು ಹಾಲು ತರಲು ಹೊರಟಿದ್ದರು ಎನ್ನಲಾಗಿದೆ. ಥಣಿಸಂದ್ರದ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಶಾಲಾ ಬಸ್ ಏಕಾಏಕಿ ತಿರುಗಿದಾಗ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನ್‌ಸ್ಟೇಬಲ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ