ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ.
ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ತಿಳಿಸಿದ್ದಾರೆ.
ಈ ಯೋಜನೆಯಿಂದ ಪ್ರತಿ ವರ್ಷ 323 ಕೋಟಿ ರೂ. ಲಾಜಿಸ್ಟಿಕ್ಸ್ ವೆಚ್ಚ ಉಳಿತಾಯವಾಗಲಿದೆ. ವಾರ್ಷಿಕ 25 ಮಿಲಿಯನ್ ಟನ್ ಹೆಚ್ಚುವರಿ ಸರಕು ಸಾಗಣೆಗೆ ಅನುಕೂಲ ಮಾಡಿಕೊಡುತ್ತದೆ. ಎಂದು ಸಚಿವರು ತಿಳಿಸಿದ್ದಾರೆ.
ಪ್ರ
ಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಸುಮಾರು 18,509 ಕೋಟಿ ರೂ. ವೆಚ್ಚದ ಮೂರು ಯೋಜನೆಗಳನ್ನು ಅನುಮೋದಿಸಿದೆ. ಈ ಯೋಜನೆಗಳಲ್ಲಿ ಬಳ್ಳಾರಿ-ಹೊಸಪೇಟೆ ನಡುವಿನ ಮೂರನೇ ಮತ್ತು ನಾಲ್ಕನೇ ಮಾರ್ಗಗಳ ನಿರ್ಮಾಣವೂ ಸೇರಿದೆ.
ಈ ಹೊಸ ರೈಲು ಮಾರ್ಗ ಹಂಪಿ (ಯುನೆಸ್ಕೋ ವಿಶ್ವ ಪರಂಪರೆಯ ತಾಣ), ಬಳ್ಳಾರಿ ಕೋಟೆ, ದರೋಜಿ ಕರಡಿ ಧಾಮ, ತುಂಗಭದ್ರಾ ಅಣೆಕಟ್ಟು, ಕೆಂಚನಗುಡ್ಡ, ವಿಜಯ ವಿಠಲ ದೇವಾಲಯ, ಇತ್ಯಾದಿ ಪ್ರಮುಖ ಪ್ರವಾಸಿ ತಾಣಗಳ ಸಂಪರ್ಕವನ್ನು ಸುಧಾರಿಸುತ್ತದೆ. ಅಲ್ಲದೆ, ಕಬ್ಬಿಣದ ಅದಿರು ಸಮೃದ್ಧ ಬಳ್ಳಾರಿ ಪ್ರದೇಶಕ್ಕೆ ಸಂಪರ್ಕವನ್ನು ಉತ್ತಮಗೊಳಿಸುತ್ತದೆ.
65 ಕಿ.ಮೀ ಉದ್ದದ ಬಳ್ಳಾರಿ-ಹೊಸಪೇಟೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗ ಯೋಜನೆಯು 34 ಪ್ರಮುಖ ಸೇತುವೆಗಳು ಮತ್ತು 220 ಸಣ್ಣ ಸೇತುವೆಗಳನ್ನು ಒಳಗೊಂಡಿರುತ್ತದೆ. ಇದರ ಜೊತೆಗೆ, ಈ ಯೋಜನೆಯು 11 ರಸ್ತೆ ಓವರ್ ಬ್ರಿಡ್ಜ್‌ಗಳು (ROBಗಳು) ಮತ್ತು 14 ರಸ್ತೆ ಕೆಳ ಸೇತುವೆಗಳನ್ನು (RUBಗಳು) ಒಳಗೊಂಡಿರುತ್ತದೆ. ಈ ಬಳ್ಳಾರಿ-ಹೊಸಪೇಟೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗ ಯೋಜನೆಯನ್ನು 4 ವರ್ಷಗಳಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ