ಶಿರಸಿ: ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಶಿವರಾಮ ಹೆಬ್ಬಾರ ಅವಿರೋಧ ಆಯ್ಕೆ

ಶಿರಸಿ: ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ (ಕೆಡಿಸಿಸಿ) ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸತತವಾಗಿ ಎರಡನೇ ಬಾರಿಗೆ ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಜೊಯಿಡಾದ ಕೃಷ್ಣ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ (ಫೆ.೧೬) ನಗರದ ಕೆಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಚಂದ್ರಶೇಖರ ಅವರ ನೇತೃತ್ವದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಶಿವರಾಮ ಹೆಬ್ಬಾರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣ ದೇಸಾಯಿ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ, ಇಬ್ಬರನ್ನೂ ಅವಿರೋಧವಾಗಿ ಆಯ್ಕೆ ನಡೆಯಿತು.
ಈ ಬಾರಿಯ ಕೆಡಿಸಿಸಿ ಬ್ಯಾಂಕ್ ಚುನಾವಣೆ ಇಬ್ಬರು ಪ್ರಭಾವಿ ನಾಯಕರ ನಡುವಿನ ಪ್ರತಿಷ್ಠೆಯ ಕಣವಾಗಿತ್ತು. ಮಾಜಿ ಸಚಿವ ಶಿವರಾಮ ಹೆಬ್ಬಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಬೆಂಬಲಿತ ತಂಡಗಳ ನಡುವೆ ನೇರ ಹಣಾಹಣಿ ನಡೆದಿತ್ತು.
ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹೆಬ್ಬಾರ್ ತಂಡದ 11 ಅಭ್ಯರ್ಥಿಗಳು ಜಯಭೇರಿ ಬಾರಿಸಿದರೆ, ಸಚಿವರ ತಂಡ 5 ಸ್ಥಾನಗಳಲ್ಲಿ ಜಯಗಳಿಸಿದ್ದರು.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement