ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್ ದುರಂತ ಸಂಭವಿಸಿದೆ. ಮಹಾನಗರದ ಚಂದ್ರಲೇಔಟ್ ಬಿಎಂಟಿಸಿ ಡಿಪೋ (BMTC) ಬಳಿ ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಮ್ಮೆಗೆ ಹೊತ್ತಿ ಉರಿದಿದೆ ಎಂದು ವರದಿಯಾಗಿದೆ. ಈ ಘಟನೆ ಇಂದು, ಬುಧವಾರ 10:20ರ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ.
ಬೆಂಕಿಯಿಂದ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಹತ್ತಿಕೊಂಡಾಗ ಬಸ್ನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ. ಇದರಿಂದ ಭಾರೀ ಅನಾಹುತ ತಪ್ಪಿದೆ.
ಚಂದ್ರಲೇಔಟ್ ಪ್ರದೇಶದ ಬಿಎಂಟಿಸಿ ಡಿಪೋ ಬಳಿ ಬಸ್ ನಿಲ್ದಣದ ಸಮೀಪವೇ ಅದನ್ನು ನಿಲ್ಲಿಸಲಾಗಿತ್ತು. ಈ ಸಮಯದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗನೆ ಹೊತ್ತಿ ಉರಿದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ನಂತರ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲೇ ಬಸ್ಸಿಗೆ ಸಾಕಷ್ಟು ಹಾನಿಯಾಗಿದೆ. ಬಸ್ಸಿನಲ್ಲಿ ಯಾಕೆ ಬೆಂಕಿ ಕಾಣಿಸಿಕೊಂಡಿದೆ ಎಂಬುದಕ್ಕೆ ನಿಖರ ಮಾಹಿತಿ ಇಲ್ಲ.


ನಿಮ್ಮ ಕಾಮೆಂಟ್ ಬರೆಯಿರಿ