ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ

ಬಾಗಲಕೋಟೆ : ಶಿವಾಜಿ ಜಯಂತಿ (shivaji jayanthi) ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ (Stone pelting) ನಡೆಸಿರುವ ಘಟನೆ ಬಾಗಲಕೋಟೆಯ (bagalakote ) ಕಿಲ್ಲಾ ಓಣಿಯಲ್ಲಿ ನಡೆದಿದೆ.
ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್​​ ಸಿಬ್ಬಂದಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.
ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಒಬ್ಬರ ತಲೆಗೆ ಗಾಯವಾಗಿದೆ ಎನ್ನಲಾಗಿದೆ.

ಶಿವಾಜಿ ಜಯಂತಿ ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲು ಬಂದು ಬಿದ್ದಿವೆ. ಸದ್ಯ ಪರಿಸ್ಥಿತಿ ತಿಳಿಯಾಗಿದ್ದು, ನಾವು ಪರಿಶೀಲನೆ ಮಾಡುತ್ತಿದ್ದೇವೆ. ಹೆಚ್ಚಿನ ಭದ್ರತೆ ‌ಕಲ್ಪಿಸಲಾಗಿದ್ದು, ಆರೋಪಿಗಳನ್ನ ಬಂಧಿಸಲಾಗುತ್ತದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಬಾಗಲಕೋಟೆ ಎಸ್ಪಿ ತಿಳಿಸಿದ್ದಾರೆ.
ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಅಕ್ರಮ ವಲಸೆ ತಡೆಯಲು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಿ ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಘಟನೆಯ ಹಿನ್ನೆಲೆಯಲ್ಲಿ ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಾಗಲಕೋಟೆ ಉಪವಿಭಾಗಾಧಿಕಾರಿ ಈ ಬಗ್ಗೆ ಆದೇಶಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ 4 ಕ್ಕಿಂತ ಹೆಚ್ಚು ಜನ ಸೇರಿ‌ ತಿರುಗಾಡುವಂತಿಲ್ಲ. ಅನುಮತಿ ಇಲ್ಲದೆ ಯಾವುದೇ ಸಭೆ ಸಮಾರಂಭ ನಡೆಸುವುದು, ಪ್ರತಿಭಟನೆ ನಡೆಸುವುದನ್ನು ನಿಷೇಧಿಸಲಾಗಿದೆ . ಅಪಾಯಕಾರಿ ಶಸ್ತ್ರಾಸ್ತ್ರ ಹಿಡಿದು ಓಡಾಡುವುದು, ಸುರಕ್ಷತೆಗೆ ಧಕ್ಕೆ ತರುವಂತ ಯಾವುದೇ ಚಟುವಟಿಕೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement