ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ತಡೆದ ಶಿಕ್ಷಕರ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆದ ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಲ್ಲೆ ನಡೆದ ಘಟನೆ ಕಲಬುರ್ಗಿ ನಗರದ ಡಾ. ಮಾಲಕರೆಡ್ಡಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ಈಚೆಗೆ ನಡೆದಿದೆ ಎಂದು ವರದಿಯಾಗಿದೆ.
ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಆಂತರಿಕ ಪರೀಕ್ಷೆಯ ಸಮಯದಲ್ಲಿ ಶಹಬಾಜ್ ಎಂಬ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸಿ ನಕಲು ಮಾಡಲು ಪ್ರಯತ್ನಿಸಿದ್ದ ಎಂದು ಹೇಳಲಾಗಿದೆ. ಈ ಸಮಯದಲ್ಲಿ, ಇದನ್ನು ಗಮನಿಸಿದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ ಅವರು ವಿದ್ಯಾರ್ಥಿಯನ್ನು ಪ್ರಶ್ನಿಸಿ ಉತ್ತರ ಪತ್ರಿಕೆಯನ್ನು ವಶಕ್ಕೆ ತೆಗೆದುಕೊಂಡು ಆತನಿಗೆ ತರಗತಿಯಿಂದ ಹೊರಹೋಗುವಂತೆ ಹೇಳಿದ್ದಾರೆ.

ಇದರಿಂದಾಗಿ ಆಕ್ರೋಶಗೊಂಡ ವಿದ್ಯಾರ್ಥಿ ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈಗ ವೈರಲ್‌ ಆಗಿದೆ.
ಹಲ್ಲೆ ನಡೆಯುತ್ತಿರುವಾಗ, ಇತರ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಅದರ ನಂತರ, ಆರೋಪಿ ವಿದ್ಯಾರ್ಥಿ ಪರೀಕ್ಷಾ ಕೇಂದ್ರದಿಂದ ಹೊರನಡೆದಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಗೆ ಯಾವುದೇ ದೂರು ದಾಖಲಿಸಿಲ್ಲ ಎಂದು ತಿಳಿದುಬಂದಿದೆ. ಕಾಲೇಜು ಆಡಳಿತವು ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement