ಸುಳ್ಳು ಮಾಹಿತಿ ಹಂಚಿಕೊಂಡು ಅಪಪ್ರಚಾರ ಆರೋಪ ; ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ಮುಡಾ ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಂಬಡ್ತಿ ಪಡೆಯಲು ಡಿ.ಬಿ.ನಟೇಶ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪಮಾಡಿದ್ದರು. ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ನಟೇಶ ನೀಡಿದ್ದ ದೂರಿನ ಅನ್ವಯ ಸ್ನೇಹಮಯಿ ಕೃಷ್ಣ ಅವರ ಬಂಧನವಾಗಿದೆ.
 ನನ್ನ ಫೋಟೋ, ನಕಲಿ ಆಡಿಯೋ ಹಾಗೂ ದಾಖಲೆ ಸೃಷ್ಟಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ವಿರುದ್ಧ ನಟೇಶ ದೂರು ನೀಡಿದ್ದರು.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement