ಕೆನಡಾ ಪ್ರಧಾನಿ ಮಾರ್ಕ್ ಕಾರ್ನೆ ಭಾರತ ಭೇಟಿ

ಒಟ್ಟಾವಾ (ಕೆನಡಾ) : ಕೆನಡಾದ ಪ್ರಧಾನಿ ಮಾರ್ಕ್ ಕಾರ್ನೆ ಅವರು ಫೆಬ್ರವರಿ 26 ರಿಂದ ಮಾರ್ಚ್ 7ರ ವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸೋಮವಾರ ಅವರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಜಸ್ಟಿನ್ ಟ್ರುಡೊ ನಂತರ ಅಧಿಕಾರ ವಹಿಸಿಕೊಂಡ ಮಾರ್ಕ್ ಕಾರ್ನೆ ಅವರ ಮೊದಲ ಭಾರತ ಭೇಟಿ ಇದಾಗಿದೆ.
ಕಾರ್ನೆ ಅವರು ಮೊದಲು ಮುಂಬೈಗೆ ಭೇಟಿ ನೀಡಿ, ನಂತರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಭಾರತ ಮತ್ತು ಕೆನಡಾ ನಡುವಿನ ಸಂಬಂಧವನ್ನು ವಿಸ್ತರಿಸುವುದು, ವಿಶೇಷವಾಗಿ ವ್ಯಾಪಾರ, ಇಂಧನ, ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಪ್ರತಿಭೆ, ಸಂಸ್ಕೃತಿ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಹೊಸ ಪಾಲುದಾರಿಕೆಯನ್ನು ಹೊಂದುವುದು ಈ ಭೇಟಿಯ ಪ್ರಮುಖ ಉದ್ದೇಶವಾಗಿದೆ.

ಕೆನಡಾದಲ್ಲಿ ಹೂಡಿಕೆ ಮಾಡಲು ಮತ್ತು ಉಭಯ ದೇಶಗಳ ಉದ್ಯಮಗಳ ನಡುವೆ ಹೊಸ ಪಾಲುದಾರಿಕೆಗಳನ್ನು ಸೃಷ್ಟಿಸಲು ಅವರು ವ್ಯಾಪಾರ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ. 2030ರ ವೇಳೆಗೆ ಉಭಯ ದೇಶಗಳ ನಡುವಿನ ವ್ಯಾಪಾರವನ್ನು 70 ಬಿಲಿಯನ್ ಡಾಲರ್‌ಗೆ ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (CEPA) ಕುರಿತು ಮಾತುಕತೆ ನಡೆಸಲಿದ್ದಾರೆ.
2024ರಲ್ಲಿ ಭಾರತವು ಕೆನಡಾದ ಏಳನೇ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿದ್ದು, ಸುಮಾರು 31 ಬಿಲಿಯನ್ ಡಾಲರ್ ಮೊತ್ತದ ವಹಿವಾಟು ನಡೆದಿತ್ತು.

ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement