
ಬೆಳಗಾವಿ : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಮೃತ ವಿದ್ಯಾರ್ಥಿನಿಯನ್ನು ಭೂಮಿಕಾ (17) ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆಯಲು ತೆರಳುವ ಸಲುವಾಗಿ ಸ್ನಾನ ಮುಗಿಸಿಕೊಂಡು ಹೊರಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾಳೆ ಎನ್ನಲಾಗಿದೆ. ತಕ್ಷಣವೇ ಪೋಷಕರು ಮಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವಿದ್ಯಾರ್ಥಿನಿ ಭೂಮಿಕಾ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.
ಮಗಳ ಅಕಾಲಿಕ ಮರಣದಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯಿಂದ ಬಂಬಲವಾಡ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ, ಈ ಘಟನೆಯು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು (ಫೆ.೨೮) ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಮಾರ್ಚ್ 17ರವರೆಗೆ ಪರೀಕ್ಷೆ ನಡೆಯಲಿದೆ.



ನಿಮ್ಮ ಕಾಮೆಂಟ್ ಬರೆಯಿರಿ