ಶಿಗ್ಗಾಂವಿ ಬಳಿ ಅಪಘಾತ; ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇತ್ತೀಚೆಗಷ್ಟೇ ವಿವಾಹವಾಗಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿ ಸಮೀಪದ ಅಂಬುಜಾ ಫ್ಯಾಕ್ಟರಿ ಬಳಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ.
ದೇವರ ದರ್ಶನ ಮುಗಿಸಿಕೊಂಡು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಮುಂಜಾನೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ನಗರದ ನಿವಾಸಿಗಳಾದ ಕಾರ್ತಿಕ ಹೂಗಾರ (34), ಐಶ್ವರ್ಯ (30) ದಂಪತಿ ಎಂದು ಗುರುತಿಸಲಾಗಿದೆ. ಹಾವೇರಿಯ ಕೀರ್ತಿ ಹೂಗಾರ ಮತ್ತು ಶಿಗ್ಗಾಂವಿಯ ಐಶ್ವರ್ಯ ಅವರ ವಿವಾಹ 15 ದಿನಗಳ ಹಿಂದೆ ನಡೆದಿತ್ತು ಎಂದು ಹೇಳಲಾಗಿದೆ. ದೇವರ ದರ್ಶನ ಪಡೆದುಕೊಂಡು ಹಾವೇರಿಗೆ ಮರಳುವ ಸಮಯದಲ್ಲಿ ಈ ದುರ್ಘಟನೆ ಸಂಭವಿದೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ತಡಸ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement