ಇರಾನ್‌ ಯುದ್ಧ : ಅಮೆರಿಕನ್ ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ ದಾಖಲೆಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆಯಲ್ಲಿನ ಭಾರಿ ಏರಿಕೆಯಿಂದಾಗಿ ಬುಧವಾರ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಭಾರಿ ಕುಸಿತ ಕಂಡಿದೆ. ಮೊದಲ ಬಾರಿಗೆ ರೂಪಾಯಿ ಮೌಲ್ಯವು ₹92 ರ ಗಡಿ ದಾಟಿದ್ದು, ಬೆಳಿಗ್ಗೆ 10:40ರ ಸುಮಾರಿಗೆ ₹92.17 ಕ್ಕೆ ತಲುಪಿತ್ತು.
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಹೂಡಿಕೆದಾರರಲ್ಲಿ ಆತಂಕ ಮನೆಮಾಡಿದೆ. ಇದರಿಂದಾಗಿ ಸುರಕ್ಷಿತ ಹೂಡಿಕೆಯತ್ತ ಹೂಡಿಕೆದಾರರು ಮುಖ ಮಾಡುತ್ತಿರುವುದು ರೂಪಾಯಿ ಮೇಲೆ ಒತ್ತಡ ಹೇರಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಉಂಟಾದಾಗ ಹೂಡಿಕೆದಾರರು ಡಾಲರ್ ಅನ್ನು ‘ಸುರಕ್ಷಿತ ಆಸ್ತಿ’ ಎಂದು ಪರಿಗಣಿಸುತ್ತಾರೆ. ಇದರಿಂದಾಗಿ ಡಾಲರ್ ಬೇಡಿಕೆ ಹೆಚ್ಚಾಗಿ ಇತರ ದೇಶಗಳ ಕರೆನ್ಸಿಗಳ ಮೌಲ್ಯ ಕುಸಿಯುತ್ತಿದೆ.

ಕಚ್ಚಾ ತೈಲ ಬೆಲೆ ಏರಿಕೆ:
ಮಧ್ಯಪ್ರಾಚ್ಯದಲ್ಲಿನ ಅಸ್ಥಿರತೆಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುವ ಭೀತಿ ಎದುರಾಗಿದ್ದು, ಕಚ್ಚಾ ತೈಲ ಬೆಲೆ ಗಗನಕ್ಕೇರಿದೆ. ಭಾರತವು ತನ್ನ ತೈಲ ಅಗತ್ಯದ ಶೇ. 85 ರಷ್ಟನ್ನು ಆಮದು ಮಾಡಿಕೊಳ್ಳುವುದರಿಂದ, ಬೆಲೆ ಏರಿಕೆಯು ದೇಶದ ಆಮದು ವೆಚ್ಚವನ್ನು ಹೆಚ್ಚಿಸುತ್ತದೆ.
ಭಾರತದ ಆರ್ಥಿಕತೆಯ ಮೇಲೆ ಪರಿಣಾಮ:
ತೈಲ ಬೆಲೆ ಏರಿಕೆಯಿಂದ ಭಾರತದ ಆಮದು ವೆಚ್ಚ ಹೆಚ್ಚಾಗಲಿದ್ದು, ಇದು ಚಾಲ್ತಿ ಖಾತೆ ಕೊರತೆ (Current Account Deficit) ಹೆಚ್ಚಾಗಲು ಕಾರಣವಾಗಬಹುದು.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

ಹಣದುಬ್ಬರ: ಆಮದು ವೆಚ್ಚ ಹೆಚ್ಚಾದಂತೆ ದೇಶೀಯ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಸಾಮಾನ್ಯ ಜನರ ಮೇಲೆ ಹೊರೆಯಾಗುವ ಸಾಧ್ಯತೆಯಿದೆ.
ಬಂಡವಾಳ ಹೊರಹರಿವು: ಜಾಗತಿಕ ಅಸ್ಥಿರತೆಯ ಸಂದರ್ಭದಲ್ಲಿ ವಿದೇಶಿ ಹೂಡಿಕೆದಾರರು ಭಾರತದಂತಹ ಉದಯೋನ್ಮುಖ ಮಾರುಕಟ್ಟೆಗಳಿಂದ ಹಣವನ್ನು ಹಿಂತೆಗೆದುಕೊಂಡು ಅಮೆರಿಕದ ಬಾಂಡ್‌ಗಳಲ್ಲಿ ಹೂಡಿಕೆ ಮಾಡಬಹುದು.
ಮಧ್ಯಪ್ರಾಚ್ಯದ ಬೆಳವಣಿಗೆಗಳು ಮತ್ತು ಕಚ್ಚಾ ತೈಲ ಬೆಲೆಯ ಏರಿಳಿತಗಳು ಮುಂಬರುವ ದಿನಗಳಲ್ಲಿ ರೂಪಾಯಿಯ ಭವಿಷ್ಯವನ್ನು ನಿರ್ಧರಿಸಲಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement