ಶಿರಸಿ : ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ

ಶಿರಸಿ: ಯುವಕನೋರ್ವ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಸಮೀಪದ ಮುಡೇಸರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ರವೀಶ ನಾಯ್ಕ (22) ಎಂದು ಗುರುತಿಸಲಾಗಿದೆ.  ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಇವರು ಮದ್ಯ ವ್ಯಸನಿಯಾಗಿದ್ದರು ಎನ್ನಲಾಗಿದೆ.
ಮಂಗಳವಾರ ತನ್ನ ಮನೆಯ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೆ ತೆರಳಿ ಅಲ್ಲಿ ನಾಡ ಬಂದೂಕಿನಿಂದ ತನಗೆ ತಾನೇ ಗುಂಡು ಹೊಡೆದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಾಹಿತಿ ತಿಳಿಯುತ್ತಿದ್ದಂತೆಯೇ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ನಾಡ ಬಂದೂಕು ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement