ಕರ್ನಾಟಕ ಬಜೆಟ್‌ 2026 | ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026-27ರಲ್ಲಿ ಘೋಷಣೆ ಮಾಡಿದ್ದಾರೆ.
ಹವ್ಯಕ ಭಾಷೆಯ ವಿಶಿಷ್ಟ ಮತ್ತು ಅಪರೂಪದ ಭಾಷೆಯ ಅಧ್ಯಯನ, ಅಭಿವೃದ್ಧಿ ಮತ್ತು ಸಂರಕ್ಷಣೆ ದೃಷ್ಟಿಯಿಂದ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವುದಾಗಿ ಅವರು ಹೇಳಿದ್ದಾರೆ.
ಹವ್ಯಕ ಭಾಷೆ ಅಥವಾ ಹವಿಗನ್ನಡ ಎಂಬುದು ಕನ್ನಡದ ಒಂದು ವಿಶಿಷ್ಟ ಹಾಗೂ ಪ್ರಾಚೀನ ಉಪಭಾಷೆಯಾಗಿದೆ. ಈ ಭಾಷೆಯನ್ನು ಮುಖ್ಯವಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯಲ್ಲಿನ ಹವ್ಯಕ ಬ್ರಾಹ್ಮಣರು ಮಾತನಾಡುತ್ತಾರೆ.
ಹವಿಗನ್ನಡ, ಹವ್ಯಕ ಕನ್ನಡ, ಹೈವಗನ್ನಡ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಡುವ ಕರ್ನಾಟಕದ ಹವ್ಯಕ ಭಾಷೆಯು ಕನ್ನಡದ ಉಪಭಾಷೆಯಾಗಿದ್ದು,  ಭಾಷಾ ವೈವಿಧ್ಯ ಹಾಗೂ ಭಾಷಾ ಶ್ರೀಮಂತಿಕೆ ಕಾರಣದಿಂದಾಗಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದೆ.ನೂತನ ಅಕಾಡೆಮಿಯ ಮೂಲಕ ಹವ್ಯಕ ಭಾಷೆಯ ಅಭಿವೃದ್ಧಿಗೆ ಸಂಬಂಧಿಸಿದ ಕೆಲಸಗಳು ನಡೆಯಲಿವೆ.
ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರು  ಪ್ರಸ್ತಾವವನ್ನು ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಗಿರಿಧರ ಕಜೆ ಅವರು ಸ್ವಾಗತಿಸಿದ್ದಾರೆ. ಈ ಮಹತ್ವದ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿಗಳನ್ನು ಅವರು ಸಮಸ್ತ ಹವ್ಯಕರ ಪರವಾಗಿ ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
 ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ವೈಶಿಷ್ಟ್ಯಪೂರ್ಣವಾದ ಹವ್ಯಕ ಭಾಷೆಯ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ “ಹವ್ಯಕ ಭಾಷಾ ಅಕಾಡೆಮಿ” ಸ್ಥಾಪಿಸುವಂತೆ ಅಖಿಲ ಹವ್ಯಕ ಮಹಾಸಭೆಯು ಮಾಡಿದ ಮನವಿಯನ್ನು ಪರಿಗಣಿಸಿ ರಾಜ್ಯ ಸರ್ಕಾರವು “ಹವ್ಯಕ ಭಾಷಾ ಅಕಾಡೆಮಿ”ಯನ್ನು ಆಯವ್ಯಯ ಪತ್ರದಲ್ಲಿ ಘೋಷಿಸಿದೆ ಎಂದು ಅಖಲಿ ಹವ್ಯಕ ಮಹಾಸಭಾ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದೆ.
 ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ವೈಶಿಷ್ಟ್ಯಪೂರ್ಣವಾದ ಹವ್ಯಕ ಭಾಷೆಯ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ “ಹವ್ಯಕ ಭಾಷಾ ಅಕಾಡೆಮಿ” ಸ್ಥಾಪಿಸುವಂತೆ ಅಖಿಲ ಹವ್ಯಕ ಮಹಾಸಭೆಯು ಮಾಡಿದ ಮನವಿಯನ್ನು ಪರಿಗಣಿಸಿ ರಾಜ್ಯ ಸರ್ಕಾರವು “ಹವ್ಯಕ ಭಾಷಾ ಅಕಾಡೆಮಿ”ಯನ್ನು ಆಯವ್ಯಯ ಪತ್ರದಲ್ಲಿ ಘೋಷಿಸಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement