ಬೆಂಗಳೂರು | ಮೂರು ದಿನದ ಹಿಂದಿನ ಸಾಂಬಾರ ಬಡಿಸಿದ್ದಕ್ಕೆ ದಂಪತಿ ಮಧ್ಯೆ ಜಗಳ ; ಮಹಿಳೆ ಆತ್ಮಹತ್ಯೆ

ಬೆಂಗಳೂರು: ಕ್ಷುಲ್ಲಕ ಕಾರಣವೊಂದು ಮಹಿಳೆಯೊಬ್ಬರ ಪ್ರಾಣಪಕ್ಷಿ ಹಾರಿಹೋಗುವಂತೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂರು ದಿನದ ಹಳೆಯ ಸಾಂಬಾರ್ ಬಡಿಸಿದ್ದಕ್ಕೆ ಗಂಡ ಆಕ್ಷೇಪಿಸಿದ ನಂತರ ನಡೆದ ಜಗಳದಿಂದ ಮನನೊಂದ 27 ವರ್ಷದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಮಹಿಳೆಯನ್ನು ಕಾವ್ಯ ಎಂದು ಗುರುತಿಸಲಾಗಿದೆ. ಈಕೆಗೆ ಐದು ವರ್ಷಗಳ ಹಿಂದೆ ವಿವಾಹವಾಗಿದ್ದು, ನಾಲ್ಕು ವರ್ಷದ ಮಗುವಿದೆ.
ವರದಿಗಳ ಪ್ರಕಾರ, ಗುರುವಾರ ಕಾವ್ಯ ಮೂರು ದಿನಗಳ ಹಿಂದೆ ಮಾಡಿದ್ದ ಸಾಂಬಾರನ್ನು ಬಿಸಿ ಮಾಡಿ ಪತಿಗೆ ಬಡಿಸಿದ್ದರು. ಈ ವಿಚಾರವಾಗಿ ದಂಪತಿ ನಡುವೆ ವಾಗ್ವಾದ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದ ನಂತರ ಮನನೊಂದ ಮನನೊಂದ ಕಾವ್ಯ, ಮನೆಯಲ್ಲಿದ್ದ ಕೃಷಿ ಬಳಕೆಯ ಕೀಟನಾಶಕವನ್ನು ಸೇವಿಸಿದ್ದಾರೆ.
ವಿಷ ಸೇವಿಸಿದ ನಂತರ ಕಾವ್ಯ ವಾಂತಿ ಮಾಡಿಕೊಳ್ಳಲು ಆರಂಭಿಸಿದಾಗ ಕುಟುಂಬಸ್ಥರು ತಕ್ಷಣ ಅವರನ್ನು ಗಮನಿಸಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement