ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಚರ್ಚಿಸಿ ಮೂರು ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ.
ಒಟ್ಟು ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ಉಳಿದ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್ಗೆ ನೀಡಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರಿಸಿದೆ.
ಬಿಜೆಪಿ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳು
ಈಶಾನ್ಯ ಶಿಕ್ಷಕರ ಕ್ಷೇತ್ರ: ಶಶೀಲ ಜಿ. ನಮೋಶಿ
ಪಶ್ಚಿಮ ಪದವೀಧರರ ಕ್ಷೇತ್ರ: ಎಸ್.ವಿ. ಸಂಕನೂರು
ಆಗ್ನೇಯ ಪದವೀಧರರ ಕ್ಷೇತ್ರ: ಕೆ.ಎಂ. ಸುರೇಶ ಅವರನ್ನು ಅಭ್ಯರ್ಥಿಗಳಾಗಿ ಹೆಸರಿಸಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ.
ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ಈ ಬಾರಿ ಚುನಾವಣೆ ಘೋಷಣೆಯಾಗುವ ಮೊದಲೇ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಈ ಮೂಲಕ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಪಕ್ಷವು ತನ್ನ ರಣತಂತ್ರವನ್ನು ಆರಂಭಿಸಿದಂತಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ