ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್ 9ರಂದು ಮತದಾನ ನಡೆಯಲಿದೆ.
ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಈ ಎರಡೂ ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಬಾಗಲಕೋಟೆ ಕ್ಷೇತ್ರ ಎಚ್​.ವೈ.ಮೇಟಿ ನಿಧನದಿಂದ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಾಗಿತ್ತು.
ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 16ರಿಂದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಹಾಗೂ ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆದಿನವಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement