ಚಳ್ಳಕೆರೆ ಬಳಿ ಅಪಘಾತ; ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಮತ್ತಿಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರ್‌ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರನ್ನು ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ, ಅಂಬರೀಶ ಹಾಗೂ ಸಚಿನ್ ಎಂದು ಗುರುತಿಸಲಾಗಿದೆ. ಬೆಂಗಳೂರು ಕಡೆಯಿಂದ ಬಳ್ಳಾರಿಗೆ ತೆರಳುವಾಗ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement