ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಬಿಜೆಪಿ ಸೇರಿದ ಸಂಸದ ಪ್ರದ್ಯುತ್ ಬೋರ್ಡೊಲೋಯ್

ನವದೆಹಲಿ: ಚುನಾವಣೆ ಗೋಷಣೆಯಾದ ಬೆನ್ನಲ್ಲೇ ಕಾಂಗ್ರೆಸಿಗೆ ದೊಡ್ಡ ಆಘಾತದಲ್ಲಿ ಅಸ್ಸಾಂನ ಲೋಕಸಭಾ ಸಂಸದ ಪ್ರದ್ಯುತ್ ಬೋರ್ಡೊಲೋಯ್ ಅವರು ಬುಧವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಅಸ್ಸಾಂ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ ಸೈಕಿಯಾ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು.
ಅಸ್ಸಾಂಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿ ಇರುವಾಗ ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ ಬೋರ್ಡೊಲೋಯ್ ಅವರ ಈ ನಡೆ ಕಾಂಗ್ರೆಸ್ಸಿಗೆ ಹಿನ್ನಡೆ ಎಂದು ವಿಶ್ಲೇಷಿಸಲಾಗಿದೆ.
ಬಿಜೆಪಿಗೆ ಸೇರಿದ ನಂತರ ಬೋರ್ಡೊಲೋಯ್ ಅವರು ಗೃಹ ಸಚಿವ ಅಮಿತ ಶಾ ಅವರನ್ನು ಭೇಟಿ ಮಾಡಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿಯಿಂದ ‘ದಿಸ್ಪುರ’ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

“ಕಾಂಗ್ರೆಸ್‌ನಲ್ಲಿ ಉಸಿರುಗಟ್ಟಿದಂತಾಗುತ್ತಿತ್ತು”
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಗ್ಗೆ ಮಾತನಾಡಿದ ಪ್ರದ್ಯುತ್ ಬೋರ್ಡೊಲೋಯ್, “ಇದಕ್ಕೆ ಯಾವುದೇ ಒಂದು ಕಾರಣವಿಲ್ಲ. ಅಲ್ಲಿ ನನಗೆ ಉಸಿರುಗಟ್ಟಿದಂತಾಗುತ್ತಿತ್ತು ಮತ್ತು ನನ್ನನ್ನು ಅವಮಾನಿಸಲಾಗುತ್ತಿತ್ತು. ಇದು ನನಗೆ ತುಂಬಾ ನೋವು ತಂದಿದೆ,” ಎಂದಿದ್ದಾರೆ.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, “ನಗಾಂವ್‌ನ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೋಯ್ ಬಿಜೆಪಿ ಸೇರಿದ್ದಾರೆ. ಅವರ ಕಾಂಗ್ರೆಸ್ ಇತಿಹಾಸ 1975 ರಿಂದಲೂ ಇದೆ. ಅವರು ಬಿಜೆಪಿ ಸೇರಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಿದೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ನಾವು ಕೇಂದ್ರ ನಾಯಕತ್ವಕ್ಕೆ ಶಿಫಾರಸು ಮಾಡುತ್ತೇವೆ. ಆತ್ಮಗೌರವ ಇರುವವರು ಕಾಂಗ್ರೆಸ್‌ನಲ್ಲಿ ಉಳಿಯಲು ಸಾಧ್ಯವಿಲ್ಲ. ನಾವು ಇನ್ನೂ ಹೆಚ್ಚಿನ ಕಾಂಗ್ರೆಸ್ ನಾಯಕರನ್ನು ನಮ್ಮ ಪಕ್ಷಕ್ಕೆ ಕರೆತರುವ ಗುರಿ ಹೊಂದಿದ್ದೇವೆ,” ಎಂದರು.

ಪ್ರಮುಖ ಸುದ್ದಿ :-   ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಯಾಮಿ ಗೌತಂ ಅತ್ಯುತ್ತಮ ನಟಿ, ಕಾರ್ತಿಕ್ ಆರ್ಯನ್–ಮಮ್ಮುಟ್ಟಿ ಅತ್ಯುತ್ತಮ ನಟರು ; ಪ್ರಶಸ್ತಿಗಳ ಪಟ್ಟಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement