ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನ್ ಗುಪ್ತಚರ ಸಚಿವ ಇಸ್ಮಾಯಿಲ್ ಖತೀಬ್ ಸಾವು

ತೆಹ್ರಾನ್/ಜೆರುಸಲೇಂ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇರಾನ್‌ನ ಗುಪ್ತಚರ ಸಚಿವ ಇಸ್ಮಾಯಿಲ್ ಖತೀಬ್ ಅವರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಸೇನೆ ಬುಧವಾರ ಪ್ರಕಟಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಈ ಸುದ್ದಿಯನ್ನು ಖಚಿತಪಡಿಸಿದ್ದು, ಇದೊಂದು “ಹೇಡಿಗಳ ಕೃತ್ಯ” ಎಂದು ಕಿಡಿಕಾರಿದ್ದಾರೆ.
ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬುಧವಾರ ರಾತ್ರಿಯಿಡೀ ನಡೆದ ದಾಳಿಯಲ್ಲಿ ಇರಾನ್‌ನ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಅವರನ್ನು “ನಿರ್ಮೂಲನೆ” ಮಾಡಲಾಗಿದೆ ಎಂದು ಹೇಳಿದ್ದರು.
ಮಂಗಳವಾರ ರಾತ್ರಿ ಇರಾನ್ ರಾಜಧಾನಿ ತೆಹ್ರಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಖತೀಬ್ ಮೃತಪಟ್ಟಿದ್ದಾರೆ. ಈ ದಾಳಿಯಲ್ಲಿ ಇರಾನ್‌ನ ಪ್ರಮುಖ ನಾಯಕರಾದ ಅಲಿ ಲಾರಿಜಾನಿ ಮತ್ತು ಅಜೀಜ್ ನಾಸಿರ್ಜಾದೆ ಸೇರಿದಂತೆ ಅವರ ಕುಟುಂಬದ ಸದಸ್ಯರು ಸಹ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ಎಚ್ಚರಿಕೆ:
ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಮಾತನಾಡಿ, “ಪ್ರಧಾನಿ ನೆತನ್ಯಾಹು ಮತ್ತು ನಾನು ಐಡಿಎಫ್‌ಗೆ (IDF) ಮುಕ್ತ ಅವಕಾಶ ನೀಡಿದ್ದೇವೆ. ಇಸ್ರೇಲ್‌ಗೆ ಬೆದರಿಕೆಯೊಡ್ಡುವ ಯಾವುದೇ ಉನ್ನತ ಇರಾನ್ ಅಧಿಕಾರಿಯನ್ನು ಹತ್ಯೆ ಮಾಡಲು ಇನ್ನು ಮುಂದೆ ಪ್ರತ್ಯೇಕ ಅನುಮತಿಯ ಅಗತ್ಯವಿಲ್ಲ” ಎಂದು ಕಡಕ್ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಇರಾನ್‌ನ ಬಸಿಜ್ ಅರೆಸೇನಾ ಪಡೆಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಘೋಲಮ್ರೆಜಾ ಸೊಲೈಮಾನಿ ಅವರನ್ನು ಇಸ್ರೇಲ್ ಹತ್ಯೆ ಮಾಡಿತ್ತು. ಫೆಬ್ರವರಿ 28 ರಂದು ನಡೆದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟ ನಂತರ ಈ ಪ್ರಾದೇಶಿಕ ಸಂಘರ್ಷ ದಾರುಣ ರೂಪ ಪಡೆದಿದೆ.
ಕಳೆದ ಎರಡು ವಾರಗಳಿಂದ ಮಧ್ಯಪ್ರಾಚ್ಯದಲ್ಲಿ ಎರಡೂ ರಾಷ್ಟ್ರಗಳು ಪರಸ್ಪರ ಪ್ರತೀಕಾರದ ದಾಳಿಗಳನ್ನು ನಡೆಸುತ್ತಿವೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಆತಂಕ ಎದುರಾಗಿದೆ.

ಪ್ರಮುಖ ಸುದ್ದಿ :-   ಟ್ರಂಪ್ ಹತ್ಯೆ ಮಾಡಿದವರಿಗೆ ₹96 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ ಇರಾನ್ ಬೆಂಬಲಿತ ಇರಾಕಿನ ಬಂಡುಕೋರರ ಗುಂಪು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement