ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಇಂದು (ಮಾರ್ಚ್‌ 19) ಯುಗಾದಿ ಹಬ್ಬದ ದಿನವೇ ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ ಏಪ್ರಿಲ್  9ರಂದು ಉಪಚುನಾವಣೆ ನಡೆಯುತ್ತಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡು ವಿಧಾನಸಭಾ ಉಪಚುನಾವಣೆಗೆ ಬಿಜೆಪಿಯ ಕೇಂದ್ರೀಯ ಆಯ್ಕೆ ಸಮಿತಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಬಾಗಲಕೋಟೆಯಿಂದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಹಾಗೂ ಮಾಜಿ ಶಾಸಕ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರಿಗೆ ಬಿಜೆಪಿ ಮತ್ತೆ ಟಿಕೆಟ್‌ ನೀಡಿದೆ. ದಾವಣಗೆರೆ ದಕ್ಷಿಣದಿಂದ ಬಿಜೆಪಿ ಅಚ್ಚರಿಯ ಅಭ್ಯರ್ಥಿಯ ಘೋಷಣೆ ಮಾಡಿದ್ದು, ಶ್ರೀನಿವಾಸ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಶ್ರೀನಿವಾಸ ದಾಸಕರಿಯಪ್ಪ ಅವರು ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಉಪಾಧ್ಯಕ್ಷರೂ ಆಗಿದ್ದಾರೆ. ಈ ಮೂಲಕ ಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.

ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement