ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ  ಮೂರ್ನಾಲ್ಕುದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮಾರ್ಚ್‌ 19ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿಯೊಂದಿಗೆ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ,  ಬಾಗಲಕೋಟೆ, ಬೀದರ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮಂಡ್ಯ, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಮೈಸೂರು ಮತ್ತು ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
 ಮಾರ್ಚ್‌ 20ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ,  ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ,  ಗದಗ, ಕೊಪ್ಪಳ,  ಮತ್ತು ರಾಯಚೂರು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಾಮರಾಜನಗರ, ಕೋಲಾರ, ಮೈಸೂರು, ಹಾಸನ, ಮಂಡ್ಯ ಕೊಡಗು, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಮಾರ್ಚ್‌ 21ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement