ಶಿವಮೊಗ್ಗ : ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶು ವೈದ್ಯೆಯೊಬ್ಬರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂಬವರು ನೀರಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10:30ರ ಸುಮಾರಿಗೆ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಅದಾದ ಬಳಿಕ ನಾಲ್ಕೈದು ದಿನಗಳಲ್ಲಿ ಹೆರಿಗೆಯಾಗಬೇಕಿದ್ದ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋದಾಗ, ನೀರಾನೆ ಹಠಾತ್ತಾಗಿ ಅವರ ಮೇಲೆ ದಾಳಿ ಮಾಡಿದೆ ಎಂದು ಹೇಳಲಾಗಿದೆ.

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು, ಶುಕ್ರವಾರ (ಮಾರ್ಚ್‌ 20) ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ತನಿಖೆಗೆ ಆದೇಶ
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಉನ್ನತ ಮಟ್ಟದ ತನಿಖೆಗೆ ಅವರು ಆದೇಶಿಸಿದ್ದಾರೆ. ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕುಷವಾಗಿ ತನಿಖೆ ನಡೆಸಲಿದೆ. ಘಟನೆ ಸಂಭವಿಸಲು ಕಾರಣಗಳೇನು ಹಾಗೂ ಸುರಕ್ಷತಾ ಲೋಪಗಳಿವೆಯೇ ಎಂಬ ಬಗ್ಗೆ ಪರಾಮರ್ಶಿಸಿ, 7 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ವಿಡಿಯೊ | ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement