ತಂದೆಯ ಕಣ್ಣೆದುರೇ ನೀರು ಪಾಲಾದ ಇಬ್ಬರು ಪುತ್ರರು

ಹೊಸಪೇಟೆ : ಈಜಲು ತೆರಳಿದ್ದ ಸಹೋದರರಿಬ್ಬರು ತಂದೆಯ ಕಣ್ಣೆದುರೇ ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಇನ್ನೊಬ್ಬ ಮಗನನ್ನು ತಂದೆ ಕಾಪಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.
ಮೃತರನ್ನು ಎಂ.ಜಿ.ಮನು (19), ಎಂ.ಜಿ.ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, ಕಿರಿಯ ಪುತ್ರನನ್ನು ತಂದೆ ರಕ್ಷಿಸಿ ದಡಕ್ಕೆ ಎಳೆದು ತಂದಿದ್ದಾರೆ.

ಹಲುವಾಗಲು ಗ್ರಾಮದ ಮಂಜಪ್ಪ, ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಯಲ್ಲಿ ಈಜಾಡಲು ತೆರಳಿದ್ದಾರೆ. ಈ ವೇಳೆ ನೀರಿಗೆ ಇಳಿದಾಗ ಮೂವರು ಮಕ್ಕಳು ಕೊಚ್ಚಿಕೊಂಡು ಹೋಗಿದ್ದಾರೆ, ಆದರೆ ತಂದೆಗೆ ಕಿರಿಯ ಪುತ್ರ ಚಿರಂಜೀವಿ ಎಂಬಾತನನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದ್ದು, ಉಳಿದಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗಿದೆ. ಮೃತ ಮನು ೧ನೇ ವರ್ಷದ ಬಿ.ಇ ಓದುತ್ತಿದ್ದ ಹಾಗೂ ಪ್ರಜ್ವಲ್ ಪಿ.ಯು ವಿದ್ಯಾರ್ಥಿ ಎನ್ನಲಾಗಿದೆ. ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement