ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಬೆಳಿಗ್ಗೆ ನಡೆದಿದ್ದು, ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಮೃತನನ್ನು 46 ವರ್ಷದ ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆ. ಆರಿಫ್ ಯಾನೆ ಟಾಬ್ಲೆಟ್ ಆರಿಫ್, ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿಯಾಗಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಲಿಸ್ಟ್‌ನಲ್ಲಿ ಈತನ ಹೆಸರಿತ್ತು ಎಂದು ಹೇಳಲಾಗಿದೆ.
ಆರಿಫ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳ ತಂಡ ಹಿಂಬಯಿಂದ ಬಂದು ಕಾರ್ ಡಿಕ್ಕಿ ಹೊಡೆಸಿದೆ. ಕೆಳಗೆ ಬಿದ್ದ ಆರಿಫ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು ಬಳಿಕ ಕಾರ್‌ನಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಗ್ಯಾಂಗ್ ವಾರ್ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿಂದೆ 2022ರಲ್ಲಿಯೂ ಆರೀಫ್ ಕೊಲೆಗೆ ಯತ್ನ ನಡೆದಿತ್ತುಎನ್ನಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ