ಇರಾನ್‌ ಯುದ್ಧದ ಮಧ್ಯೆ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಯುದ್ಧಪೂರ್ವ ಬೇಡಿಕೆಯ ಶೇ.70ರಷ್ಟಕ್ಕೆ ಹೆಚ್ಚಿಸಿದ ಕೇಂದ್ರ

ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯ ಭೀತಿಯ ನಡುವೆ ಕೇಂದ್ರ ಸರ್ಕಾರವು ದೇಶದ ಜನತೆಗೆ ಮತ್ತು ಕೈಗಾರಿಕಾ ವಲಯಕ್ಕೆ ಸಮಾಧಾನಕರ ಸುದ್ದಿ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಪ್ರತಿ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸುವುದಾಗಿ ಶುಕ್ರವಾರ ಘೋಷಿಸಿದೆ. ಜೊತೆಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಪೂರೈಕೆಯನ್ನು ಶೇ. 70ಕ್ಕೆ ಹೆಚ್ಚಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ.
ಮಧ್ಯಪ್ರಾಚ್ಯದಲ್ಲಿ ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ, ಕೈಗಾರಿಕಾ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕೇಂದ್ರ ತೈಲ ಸಚಿವಾಲಯ ಮುನ್ನೆಚ್ಚರಿಕೆ ವಹಿಸಿದೆ. ಯುದ್ಧಪೂರ್ವದ ಪೂರೈಕೆಗೆ ಹೋಲಿಸಿದರೆ, ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಈಗಿರುವ ಶೇ. 50 ರಿಂದ ಶೇ. 70 ಕ್ಕೆ ಏರಿಸಲಾಗಿದೆ.
ತೈಲ ಕಾರ್ಯದರ್ಶಿ ನೀರಜ ಮಿತ್ತಲ್ ಅವರು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಆಟೋಮೊಬೈಲ್, ಉಕ್ಕು, ಜವಳಿ, ರಾಸಾಯನಿಕ ಮತ್ತು ಪ್ಲಾಸ್ಟಿಕ್ ನಂತಹ ಕಾರ್ಮಿಕ ಪ್ರಧಾನ ಕೈಗಾರಿಕೆಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ.

ಜಾಗತಿಕ ಬಿಕ್ಕಟ್ಟು ಮತ್ತು ಭಾರತದ ಕ್ರಮ
ಭಾರತವು ತನ್ನ ಕಚ್ಚಾ ತೈಲದ ಅವಶ್ಯಕತೆಯ ಶೇ. 88 ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಇರಾನ್ ‘ಹಾರ್ಮುಜ್ ಜಲಸಂಧಿ’ಯನ್ನು ಮುಚ್ಚುವ ಎಚ್ಚರಿಕೆ ನೀಡಿರುವುದು ಜಾಗತಿಕ ಸರಬರಾಜಿನ ಮೇಲೆ ಆತಂಕ ಮೂಡಿಸಿದೆ. ಸದ್ಯಕ್ಕೆ ಭಾರತೀಯ ಹಡಗುಗಳ ಸಂಚಾರಕ್ಕೆ ಇರಾನ್ ಅವಕಾಶ ನೀಡಿದೆಯಾದರೂ, ಅನಿಶ್ಚಿತತೆ ಮುಂದುವರಿದಿದೆ.
ಇತರ ರಾಷ್ಟ್ರಗಳು ಬೆಲೆ ಏರಿಕೆ ಮಾಡುತ್ತಿದ್ದರೆ, ಭಾರತ ಸರ್ಕಾರವು ತೈಲ ಕಂಪನಿಗಳ ನಷ್ಟವನ್ನು ತಾನೇ ಭರಿಸಿ ದೇಶದ ಆರ್ಥಿಕತೆಯನ್ನು ಸುಸ್ಥಿತಿಯಲ್ಲಿಡಲು ಈ ಕ್ರಮ ಕೈಗೊಂಡಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಏರಿಳಿತಗಳಿಂದ ಗ್ರಾಹಕರನ್ನು ರಕ್ಷಿಸಲು ಸರ್ಕಾರವು ಅಬಕಾರಿ ಸುಂಕದಲ್ಲಿ ಭಾರಿ ಕಡಿತ ಮಾಡಿದೆ.
ಪೆಟ್ರೋಲ್ ಪ್ರತಿ ಲೀಟರ್‌ಗೆ ₹10 ಕಡಿತವಾಗಿದ್ದು, ಪ್ರಸ್ತುತ ಅಬಕಾರಿ ಸುಂಕ ₹3 ಕ್ಕೆ ಇಳಿಕೆಯಾಗಿದೆ. ಡೀಸೆಲ್ ಪ್ರತಿ ಲೀಟರ್‌ಗೆ ₹10 ಕಡಿತವಾಗಿದ್ದು, ಅಬಕಾರಿ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲಾಗಿದೆ.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement