ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಬೀಳುವ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 2ರ ವರೆಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಅದು ಹೇಳಿದೆ..
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮಂಡ್ಯ, ಬೆಂಗಳೂರು ಜಿಲ್ಲೆಗಳ ಕೆಲವಡೆ ಮಳೆಯಾಗಲಿದೆ. ಉಳಿದಂತೆ ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಕೆಲವಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಬಿರುಗಾಳಿ ಮತ್ತು ಗುಡುಗು-ಸಿಡಿಲು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.  ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತಾಪಮಾನ ವಿಪರೀತವಾಗಿ ಹೆಚ್ಚಿರುವುದರಿಂದ ಸಾರ್ವಜನಿಕರು ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ನೇರ ಬಿಸಿಲಿಗೆ ಹೋಗದಂತೆ ಹಾಗೂ ಕೃಷಿ ಚಟುವಟಿಕೆಗಳನ್ನು ಬೆಳಗಿನ ಸಮಯದಲ್ಲಿ ಮುಗಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement