ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಗುಡುಗು ಸಹಿತ ಮಳೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 2ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಾಳಿಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. 14 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹೇಳಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸ್ಥಳೀಯವಾಗಿ ಉಂಟಾಗಿರುವ ಪಶ್ಚಿಮ ಗಾಳಿಯ ಪ್ರಭಾವದಿಂದಾಗಿ ಈ ಮಳೆ ಸುರಿಯುತ್ತಿದೆ ಎಂದು ಹೇಳಲಾಗಿದೆ.
ಸುಮಾರು 50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಬೀಸಲಿದೆ ಹಾಗೂ ಗುಡುಗು ಸಿಡಲಿನಿಂದ ಕೂಡಿದ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಮಾರ್ಚ್‌ 30ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಕಲಬುರ್ಗಿ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮಾರ್ಚ್‌ 31ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರ್ಗಿ, ಬೀದರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಏಪ್ರಿಲ್ 1ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರ್ಗಿ, ಬೀದರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement