ಶಿವಮೊಗ್ಗ :ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಹಳ್ಳದಲ್ಲಿ ಬಿದ್ದು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಂದು ವೀರಪುರ ಗ್ರಾಮದ ಕಾಗೆಹಳ್ಳ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬಸ್ಸು ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆಗೋಡೆಗೆ (Railing) ಡಿಕ್ಕಿ ಹೊಡೆದು ನಂತರ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಭದ್ರಾವತಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಬಸ್ ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಸಂಚರಿಸುತ್ತಿತ್ತು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ