ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ : ಆಸ್ಪತ್ರೆಗೆ ದಾಖಲು

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಭಾಷಣದ ವೇಳೆ ಅಸ್ವಸ್ಥಗೊಂಡು ದಿಢೀರ್‌ ಕುಸಿದು ಬಿದ್ದಿದ್ದು ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಡಾ. ಪಿಜಿಆರ್ ಸಿಂಧ್ಯ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅವರು, ವೇದಿಕೆಯಲ್ಲಿ ಮಾತಾಡುತ್ತಿದ್ದ ವೇಳೆ ಸಮತೋಲನ ತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಸ್ಥಳದಲ್ಲಿ ಅವರಿಗೆ ಶುಶ್ರೂಷೆ ನೀಡಿ ಸಮೀಪದ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೇ ಕಾರ್ಯಕ್ರಮದಲ್ಲಿ ಸ್ಪೀಕರ್ ಯುಟಿ ಖಾದರ್ ಕೂಡ ಇದ್ದರು. ವೇದಿಕೆ ಮೇಲೆ ಅಸ್ವಸ್ಥರಾಗುತ್ತಿದ್ದಂತೆ ಸಂತೋಷ ಹೆಗ್ಡೆಯವರನ್ನು ಖಾದರ್‌ ಅವರ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ ಎನ್ನಲಾಗಿದೆ.
ವೈದ್ಯರು ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಗಣನೀಯವಾಗಿ ಕುಸಿದಿದೆ  ಎಂಬ ಮಾಹಿತಿ ಲಭ್ಯವಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement