ವಿಡಿಯೋ | ಬೆಚ್ಚಿಬೀಳಿಸುವ ದೃಶ್ಯ : ಬೈಕ್ ಸವಾರನ ಮೇಲೆ ಹಸುವಿನ ಭೀಕರ ದಾಳಿ ; ಜನ ದೊಣ್ಣೆಯಿಂದ ಹೊಡೆದ್ರೂ ಬಿಡದ ಆಕಳು

ರಾಜಕೋಟ : ಆಕಳೊಂದು ದ್ವಿಚಕ್ರ ವಾಹನ ಸವಾರನ ಮೇಲೆ ಭೀಕರವಾಗಿ ದಾಳಿ ಮಾಡಿರುವ ಘಟನೆ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ತಾಲೂಕಿನ ವೇರಾವಲ್‌ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ವ್ಯಕ್ತಿಯ ಪ್ರಾಣ ಉಳಿದಿದೆಯಾದರೂ, ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳ ಪ್ರಕಾರ, ವ್ಯಕ್ತಿಯೊಬ್ಬರು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತ್ತಿದ್ದಾಗ ಇದ್ದಕ್ಕಿದ್ದಂತೆ ಎದುರಾದ ಆಕಳು ವ್ಯಕ್ತಿ ಮೇಲೆ ದಾಳಿ ಮಾಡಿದೆ.

ವಾಹನ ಸಮೇತ ವ್ಯಕ್ತಿ ಕೆಳಗೆ ಬಿದ್ದರೂ ಅದು ಆತನ ಮೇಲೆ ತನ್ನ ದಾಳಿಯನ್ನು ಮುಂದುವರಿಸಿದೆ. ತನ್ನನ್ನು ರಕ್ಷಿಸಿಕೊಳ್ಳಲು ವ್ಯಕ್ತಿ ಹರಸಾಹಸ ಪಟ್ಟರೂ, ಸತತ ದಾಳಿಯಿಂದಾಗಿ ಅವರು ಸುಸ್ತಾಗಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ.
ದಾಳಿಯನ್ನು ಗಮನಿಸಿದ ತಕ್ಷಣ ಸ್ಥಳೀಯ ನಿವಾಸಿಗಳು ವ್ಯಕ್ತಿಯ ರಕ್ಷಣೆಗೆ ಧಾವಿಸಿದ್ದಾರೆ.ಆಕಳ ಮೇಲೆ ಕಲ್ಲು ತೂರಿ ಮತ್ತು ದೊಣ್ಣೆಗಳಿಂದ ಹೊಡೆದು ಅದನ್ನು ಓಡಿಸಲು ಯಶಸ್ವಿಯಾಗಿದ್ದಾರೆ. ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಅಲ್ಲಿಂದ ಒಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ದಾಳಿಯಿಂದಾಗಿ ವ್ಯಕ್ತಿಯ ತಲೆ, ಎದೆ ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಟೋ ರಿಕ್ಷಾದ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.
ಈ ಘಟನೆಯ ನಂತರ ವೇರಾವಲ್ ನಿವಾಸಿಗಳು ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಘಟನೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ವಸತಿ ಪ್ರದೇಶಗಳಲ್ಲಿ ಅಡ್ಡಾಡುವ ಇಂತಹ ಆಕ್ರಮಣಕಾರಿ ಪ್ರಾಣಿಗಳನ್ನು ಕೂಡಲೇ ಅಲ್ಲಿಂದ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಜನರು ಪ್ರತಿಭಟನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ವಿಡಿಯೊ | ಹಾಡಹಗಲೇ ಶಸ್ತ್ರಸಜ್ಜಿತರಿಂದ ಚಿನ್ನಾಭರಣ ಅಂಗಡಿ ದರೋಡೆ ; ಚಿನ್ನ-ನಗದು ಲೂಟಿ, ಹಲವು ಸುತ್ತು ಗುಂಡು ಹಾರಿಸಿ ಪರಾರಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement