ಶಿರಸಿ : ಎರಡು ಬಸ್‌ಗಳ ನಡುವೆ ಡಿಕ್ಕಿ ; ಹಲವರಿಗೆ ಗಾಯ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಶುಕ್ರವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಭಟ್ಕಳದಿಂದ ಹುಬ್ಬಳ್ಳಿ ಮಾರ್ಗವಾಗಿ ಮುದ್ದೆಬಿಹಾಳಕ್ಕೆ ಹೋಗುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ ಮತ್ತು ಶಿರಸಿ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸ ಎರಡೂ ಬಸ್‌ಗಳ ಮುಂಭಾಗ ಜಖಂಗೊಂಡಿದೆ.
ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯರ ನೆರವಿನೊಂದಿಗೆ ಶಿರಸಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement