ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಗಾವಲು ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ. ಎ.ಪಿ. ಅನಿಲಕುಮಾರ ಅವರ ಪರವಾಗಿ ಪ್ರಚಾರ ನಡೆಸಲು ತರೂರ್ ಅವರು ವಂಡೂರು ಪ್ರದೇಶಕ್ಕೆ ಬಂದಿದ್ದಾಗ ಈ ಘಟನೆ ಸಂಭವಿಸಿದೆ.
ಬೈಕ್ ಮತ್ತು ಕಾರುಗಳಲ್ಲಿ ಬಂದ ಗುಂಪೊಂದು ತರೂರ್ ಅವರ ವಾಹನವನ್ನು ಅಡ್ಡಗಟ್ಟಿ, ಅವರ ಅಂಗರಕ್ಷಕನನ್ನು (Gunman) ನಿಂದಿಸಿ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ. ಈ ಕುರಿತು ಅಂಗರಕ್ಷಕನೇ ನೇರವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ದುಷ್ಕರ್ಮಿಗಳ ಗುಂಪು ತರೂರ್ ಅವರ ಬೆಂಗಾವಲು ವಾಹನವನ್ನು ಬೆನ್ನಟ್ಟಿ ಕಾರಿನ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ತರೂರ್ ಅವರನ್ನು ನಿಂದಿಸಿ, ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದಾಗ ಅಂಗರಕ್ಷಕ ಮಧ್ಯಪ್ರವೇಶಿಸಿದ್ದಾರೆ.

ಪ್ರಮುಖ ಆರೋಪಿ ಬಂಧನ
ವಂಡೂರು ಬಳಿ ಶಶಿ ತರೂರ್ ಅವರ ಕಾರನ್ನು ತಡೆದಿದ್ದ ಕಾಲಿಕಾವು ನಿವಾಸಿ ಉಮರ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದ್ದು, ದಾಳಿ ನಡೆಸಲು ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ದಾಳಿಯ ಹಿಂದೆ ಯಾವುದೇ ರಾಜಕೀಯ ದ್ವೇಷ ಅಥವಾ ಪಿತೂರಿ ಇದೆಯೇ ಎಂಬುದು ಇನ್ನು ಖಚಿತವಾಗಿಲ್ಲ. ಆದರೆ, ಉದ್ದೇಶಪೂರ್ವಕವಾಗಿ ಗಲಾಟೆ ಮಾಡುವ ಸಲುವಾಗಿಯೇ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

“ದುಷ್ಕರ್ಮಿಗಳು ಗೊಂದಲ ಸೃಷ್ಟಿಸುವ ಉದ್ದೇಶದಿಂದಲೇ ಅಲ್ಲಿಗೆ ಬಂದಿದ್ದರು ಎಂಬ ಸಂಶಯವಿದೆ. ಬಂಧಿತರ ವಿಚಾರಣೆಯ ನಂತರವಷ್ಟೇ ದಾಳಿಯ ಹಿಂದಿನ ನೈಜ ಕಾರಣ ಏನೆಂದು ತಿಳಿಯಲಿದೆ,” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement