
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಸಮೀಪದ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನುತೆಲಂಗಾಣ ರಾಜ್ಯದ ಅಜಯ (24) ಎಂದು ಗುರುತಿಸಲಾಗಿದೆ. ತೆಲಂಗಾಣದಿಂದ 6 ಜನರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಲಪಾತದ ನೀರಿಗಿಳಿದಿದ್ದಾರೆ. ಈ ವೇಳೆ ಕಾಲು ಜಾರಿ ಆಳ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಸ್ಥಳದಲ್ಲಿದ್ದ ಪ್ರವಾಸಿಗರು ಈತನ ರಕ್ಷಣೆಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ. ನಂತರ ಅಂಕೋಲಾ ಅಗ್ನಿಶಾಮಕ ಕೇಂದ್ರಕ್ಕೆ ಮಾಹಿತಿ ನೀಡಲಾಯಿತು, ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಶೋಧ ಕಾರ್ಯ ನಡೆಸಿದ ನಂತರ ಮೃತ ದೇಹ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ