ಬೆಂಗಳೂರು : ಗುರುವಾರ (ಏ.9) ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಇಲಾಖೆಯ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ Karnatakaone ಮೊಬೈಲ್ ಆಪ್ ಮೂಲಕ ಫಲಿತಾಂಶ ಪಡೆಯಬಹುದು ಹಾಗೂ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ, ವಾಟ್ಸಪ್ , SMSಮೂಲಕವೂ ಫಲಿತಾಂಶ ರವಾನೆ ಆಗಲಿದೆ.
ಗುರುವಾರ ಮಧ್ಯಾಹ್ನ 3 ಗಂಟೆಗೆ ಅಂಕಪಟ್ಟಿ ಡಿಜಿ ಲಾಕರ್‌ನಲ್ಲಿ ಲಭ್ಯವಿರಲಿದೆ. https://www.digilocker.gov.in/ ಬಳಸಿ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫೆಬ್ರವರಿ 28ರಿಂದ ಮಾರ್ಚ್ 17ವರೆಗೆ ಪರೀಕ್ಷೆ ನಡೆದಿತ್ತು. ಸುಮಾರು 7.10 ಲಕ್ಷ ವಿದ್ಯಾರ್ಥಿಗಳು 1217 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು


ನಿಮ್ಮ ಕಾಮೆಂಟ್ ಬರೆಯಿರಿ