ಕಾರವಾರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ ಎಂದು ವರದಿಯಾಗಿದೆ.
ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ ವೋಕ್ಸ್ ವ್ಯಾಗನ್ (Volkswagen) ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತೀವ್ರವಾಗಿದ್ದರಿಂದ ಕಾರಿನಲ್ಲಿದ್ದ ಚಾಲಕನಿಗೆ ಹೊರಬರಲು ಸಾಧ್ಯವಾಗಿಲ್ಲ ಎಂದು ಶಂಕಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ತೀವ್ರತೆಯಿಂದ ಕಾರು ಸಂಪೂರ್ಣ ಸುಟ್ಟು ಹಾನಿಗೊಳಗಾಗಿದೆ. ಇದನ್ನು ನೋಡಿದವರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತರ ಬಗ್ಗೆ ಮಾಹಿತಿ ಹಾಗೂ ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.


ನಿಮ್ಮ ಕಾಮೆಂಟ್ ಬರೆಯಿರಿ