

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಬಾರಿ ಹೆಚ್ಚಳವಾಗಿದೆ. ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮಂಗಳೂರು ಎಕ್ಸ್‌ಪರ್ಟ್ ಪಿಯು ಕಾಲೇಜಿನ ಶಮನ್ಯು ಎಸ್ ಶೆಟ್ಟಿ, ನಂದನ್ ನಾಯಕ್ 600ಕ್ಕೆ 598 ಅಂಕ ಪಡೆದು ರಾಜ್ಯಕ್ಕ ಟಾಪರ್ ಆಗದ್ದಾರೆ. ಕಾರ್ಕಳದ ಜ್ಞಾನಸುಧಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವಿ, ಅನರ್ವಿ ಹಾಗೂ ಮಾನ್ಯ 600ರಲ್ಲಿ 597 597 ಅಂಕ ಪಡೆದು ದ್ವಿತೀಯರಾಗದ್ದಾರೆ. ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ಹಾಗೂ ಬೆಂಗಳೂರಿನ ಜೈನ್ ಕಾಲೇಜಿನ ಅದಿತಿ ಬಾಪು ಅವರು 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರಾದ ಸಂಗೀತಾ ಹಾಗೂ ಅರ್ಚನಾ ತಲಾ 598 ಅಂಕಗಳನ್ನು ಪಡೆಯುವ ಮೂಲಕ ಸ್ಥಾನ ಹಂಚಿಕೊಂಡಿದ್ದಾರೆ.

ಈ ಬಾರಿ ಪರೀಕ್ಷೆ ಕುಳಿತ ಪರೀಕ್ಷೆಗೆ ಕುಳಿತ 7,10,363 ವಿದ್ಯಾರ್ಥಿಗಳ ಪೈಕಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.86ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.
ಫಲಿತಾಂಶವನ್ನು karresults.nic.in ಅಥವಾ Karnataka one ಮೊಬೈಲ್ ಆ್ಯಪ್ ಮೂಲಕ ಪಡೆಯಬಹುದು. ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಳಿಯೇ ವಾಟ್ಸ್ಯಾಪ್ ಅಥವಾ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಿದೆ. ಡಿಜಿ ಲಾಕರ್‌ನಲ್ಲಿ ಅಂಕಪಟ್ಟಿಯನ್ನು ಪಡೆಯಲು ಅವಕಾಶ ಕಲ್ಪಿಸಿದೆ.
2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ- 1 ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಿತು. ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ಕಲಾ ವಿಭಾಗದಲ್ಲಿ 1.42 ಲಕ್ಷ, ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಫಲಿತಾಂಶದ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾವಾರು ಸಾಧನೆ, ತೇರ್ಗಡೆ ಪ್ರಮಾಣ ಹಾಗೂ ಟಾಪರ್‌ಗಳ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ
ಫಲಿತಾಂಶ ನೋಡುವುದು ಹೇಗೆ?
ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಲಾಗ್ ಇನ್ ಆಗಬೇಕು.
ಮುಖಪುಟದಲ್ಲಿ ಕಾಣುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು
ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು
ಮಾಹಿತಿ ಭರ್ತಿ ಮಾಡಿದ ನಂತರ ‘Submit’ ಬಟನ್ ಒತ್ತಬೇಕು
ಅಂಕಪಟ್ಟಿ ಪರದೆಯ ಮೇಲೆ ಕಾಣಿಸಲಿದೆ. ಭವಿಷ್ಯದ ಬಳಕೆಗಾಗಿ ಇದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬಹುದು.


ನಿಮ್ಮ ಕಾಮೆಂಟ್ ಬರೆಯಿರಿ